ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!
19 ವರ್ಷಗಳ ನಿಷ್ಠಾವಂತ ಸೇವೆಗೆ ಗೌರವ | ಸೆ.5ರಂದು ಪ್ರಶಸ್ತಿ ಪ್ರದಾನ
ಇಂಡಿ : ತಾಲ್ಲೂಕಿನ ನಾದ ಕೆಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್ ಆರ್ ನಾಗಠಾಣ ಅವರು
ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸೆ.5ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಶಿಕ್ಷಕಿ ಆರ್ ಆರ್ ನಾಗಠಾಣ ಅವರು ಶಾಲೆಗಳಲ್ಲಿ ಉತ್ತಮವಾದ ಬೋಧನೆ ಮತ್ತು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಕೈಗೊಂಡು ಮಕ್ಕಳಿಂದ ಮತ್ತು ಪಾಲಕರಿಂದ ಮತ್ತು ಇಲಾಖಾ ಅಧಿಕಾರಿಗಳಿಂದ ಸೈ ಎನಿಸಿಕೊಂಡಿದ್ದಾರೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ವಿಷಯದಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅದಲ್ಲದೇ ಕಳೆದ 19 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ, ಬದ್ಧತೆಯಿಂದ ಸೇವೆ ಸಲ್ಲಿಸಿದ್ದಾರೆ. ಇನ್ನೂ ಶಾಲೆಯಲ್ಲಿ ಗುಣಮಟ್ಟವನ್ನು ಹೆಚ್ಚಿಸಲು ವಿದ್ಯಾರ್ಥಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಮೇಲಿನ ಭಯವನ್ನು ಹೋಗಲಾಡಿಸಲು ಪರೀಕ್ಷಾ ಫಲಿತಾಂಶದ ಸುಧಾರಣೆ ಹಾಗೂ ಶಾಲೆಯ ಸರ್ವಾಂಗೀಣ ಪ್ರಗತಿಗಾಗಿ ನಿರಂತರವಾಗಿ ಪರಿಶ್ರಮ ಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.




















