ರಾಯಚೂರು : ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು, ಪೀಠಾಧ್ಯಕ್ಷರ ಆಶೀರ್ವಚನವನ್ನ ಪಡೆದ ಎಐಸಿಸಿ ವಕ್ತಾರ ರಾಹುಲ್ ಗಾಂಧಿ.
ಹೌದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಇಂದು ಮಂತ್ರಾಲಯ ಕ್ಷೇತ್ರಕ್ಕೆ ಪ್ರವೇಶಿಸಿದ್ದು. ಈ ಹಿನ್ನಲೆಯಲ್ಲಿ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದರು. ಮೊದಲಿಗೆ ಕ್ಷೇತ್ರದ ಅಧಿದೇವತೆ ಮಂಚಾಲಮ್ಮ ದೇವಿಗೆ ರಾಗಾ ಪೂಜೆ ಸಲ್ಲಿಸಿದರು. ತದನಂತರ ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ದರ್ಶನದ ನಂತರ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಶೇಷವಸ್ತ್ರ, ಫಲಮಂತ್ರಾಕ್ಷತೆ ಸ್ಮರಣಿಕೆ ನೀಡಿ ಆಶೀರ್ವದಿಸಿದರು. ಈ ವೇಳೆ ಎಐಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.