9- ರಿಂದ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವೆಡೆ ಡಿ.9ರಿಂದ ಮೂರಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ಸೇರಿ ಹಳೇ ಮೈಸೂರು ಭಾಗ, ವಿಜಯನಗರ, ಬಳ್ಳಾರಿಯಲ್ಲಿ ಡಿ.12ರವರೆಗೆ ಹಾಗೂ ಬೆಳಗಾವಿ, ಗದಗ, ಕೊಪ್ಪಳದಲ್ಲಿ ಮುಂದಿನ ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.