ವಿಜಯಪುರ : ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸಿದ್ಧೇಶ್ವರ ದೇವಸ್ಥಾನದ ಎದುರು ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇನ್ನು ತಳ್ಳುಗಾಡಿಯಲ್ಲಿ ಗ್ಯಾಸ್ ಸಿಲೆಂಡರ್, ಪೆಟ್ರೋಲ್, ಡಿಸೇಲ್, ಅಡುಗೆ ಎಣ್ಣೆ ಇಟ್ಟು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.