ಸಿಂಧನೂರು: ನಗರದ ತಹಶಿಲ್ದಾರರ ಕಚೇರಿ ಮುಂದೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ತಾಲೂಕು ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಕಾರ್ಯಕ್ರಮವನ್ನು ಡಿಸೆಂಬರ್ ತಿಂಗಳಿಂದ ಆರಂಭಿಸಿರುವು ಸ್ವಾಗತಾರ್ಹ.
ಆದರೆ ವಾರದಲ್ಲಿ ಮೂರು ದಿನಗಳಿಗೆ ಸೀಮಿತ ಮಾಡಿದ್ದಾರೆ.ವಾರವಿಡೀ
ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೆ ವಿಸ್ತರಿಸಲು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ ಆಗ್ರಹಿಸಿದರು.
ಮತಾಂಧ ಹಾಗೂ ಕೋಮುವಾದಿ ಶಕ್ತಿಗಳ ಪ್ರಜಾಪ್ರಭುತ್ವ ವಿರೋಧಿ ಗಳನ್ನು ಇದನ್ನು ವಿರೋಧಿಸುತ್ತಿದ್ದಾರೆ.ಇವರ ಒತ್ತಡಕ್ಕೆ ಮಣಿಯಬಾರದು ಎಂದು ಎಸ್.ದೇವೇಂದ್ರ ಗೌಡ ಹೇಳಿದರು.
ನಂತರ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಸಿಐಟಿಯು ತಾಲೂಕು ಸಮಿತಿ ಅಧ್ಯಕ್ಷ ರೇಣುಕಮ್ಮ, ಕಾರ್ಯದರ್ಶಿ ಯಂಕಪ್ಪ ಕೆಂಗಲ್, ಪಂಪಾವತಿ,ಚಂದಪ್ಪ,ಶರಣಮ್ಮ ಸೇರಿದಂತೆ ಅನೇಕರು ಇದ್ದರು.