ಇಂಡಿ : ನಿಂಬೆ ನಾಡಿನ ಇಂಡಿ ಪಟ್ಟಣದ ಶಂಕರ್ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಫೆ ೧೨ ರಂದು ಬೆಳಿಗ್ಗೆ ೧೧:೩೦ ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ತಾಲೂಕು ಶಾಖೆಯ ಸಂಘದ ಆಶ್ರಯದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ ಮತ್ತು ಉತ್ತಮ ಸೇವೆಗೈದ ನೌಕರರಿಗೆ ಅನುಪಮ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಂಕರಗೌಡ ಪಾಟೀಲ ಹೇಳಿದರು.
ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಹಾಗೂ ನೌಕರರ ಸಂಘದ ಅನುದಾನಲ್ಲಿ ಸುಮಾರು ರೂ ೩೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ನೌಕರರ ಸಂಘದ ಸಭಾಭವನ ನಿರ್ಮಾಣ ಮಾಡಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಶಾಸಕ ಯಶವಂತರಾಯಗೌಡ ಪಾಟೀಲ್ ನೆರೆವೆರಿಸಲ್ಲಿದ್ದು, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು. ಕಂದಾಯ ಉಪ ವಿಭಾಗ ಅಧಿಕಾರಿ ಎನ್.ಎಂ. ಚೋರಗಸ್ತಿ ಘನಉಪಸ್ಥಿತಿ ವಹಿಸಲಿದ್ದು, ಕ.ರಾ.ಸ.ನೌ. ಸಂಘ ತಾಲೂಕು ಅಧ್ಯಕ್ಷ ಶಂಕರಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕ.ರಾ.ಸ.ನೌ. ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಶೇಡಶ್ಯಾಳ, ತಹಶಿಲ್ದಾರ ಸಿ.ಎಸ್.ಕುಲಕರ್ಣಿ, ತಾ.ಪಂ. ಅಧಿಕಾರಿ ಸುನೀಲ ಮದ್ದಿನ, ಡಿ.ವೈ.ಎಸ್.ಪಿ. ಶ್ರೀಧರ ದೊಡ್ಡಿ, ಶಿಕ್ಷಣ ಕ್ಷೇತ್ರ ಅಧಿಕಾರಿ ವಸಂತ ರಾಠೋಡ, ರಾಜಶೇಖರ ದೈವಾಡಗಿ, ಸೈಯದ ಜುಬೇರಗ ಕೆರೂರ, ವಿಜಯಕುಮಾರ್ ಹತ್ತಿ ಸೇರಿದಂತೆ ಅನೇಕ ಗಣ್ಯರು ಆಗಮಿಸಿಲ್ಲಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಸಂಘದ ಪ್ರ.ಕಾರ್ಯದರ್ಶಿ ಆರ್.ಎಮ್. ಮೇತ್ರಿ , ಉಪಾಧ್ಯಕ್ಷ ಎಸ್ .ಡಿ.ಪಾಟೀಲ್, ಎಂ.ಜಿ.ಸರಸಂಬಿ,ಸುನೀಲ ಪಾಟೀಲ, ಸುನೀಲ ಪವಾರ ಉಪಸ್ಥಿತರು.