ಇಂದು ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ
ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಏ.16 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದ ಬಳಿಯ ಮಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಕಾರ್ಯಕರ್ತರೊಂದಿಗೆ ಬೃಹತ್ ಶೋಭಾಯಾತ್ರೆ ಮೂಲಕ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 12 ಕ್ಕೆ ಸ್ಟೇಶನ್ ರಸ್ತೆಯ ದರ್ಬಾರ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ.
ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.