ಸರ್ಕಾರಿ ವಕೀಲರ ನೇಮಕ: ಅರ್ಜಿ ಆಹ್ವಾನ
ವಿಜಯಪುರ, ಆಗಸ್ಟ್ 2 : ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿದ್ದು, ಸದರಿ ಹುದ್ದೆಯನ್ನು ಭರ್ತಿ ಮಾಡಲು ಉದ್ದೇಶಿಸಲಾಗಿರುವುದರಿಂದ, ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮಗಳು 1977 ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ) ರನ್ವಯ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹರು ದಿನಾಂಕ : 14-08-2024ರ ಸಂಜೆ 5.30 ಒಳಗೆ ಜಿಲ್ಲಾಧಿಕಾರಿ ಕಚೇರಿಗೆ ಅವಶ್ಯಕ ಮಾಹಿತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.



















