ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ.
ರಾಯಚೂರು: ತಾಲೂಕಿನ ಹೀರಾಪೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಡಾ ಬಿ.ಆರ್ ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಭಾರಿ ಮುಖ್ಯ ಗುರು ಸಕ್ರಪ್ಪ ಕೆ ಗೋನಾಳ್ ಮಾತನಾಡಿ ಭಾರತವು ಆಗಸ್ಟ್ 15, 1947 ರಂದು ಸ್ವತಂತ್ರವಾದ ನಂತರ, ಆಗಸ್ಟ್ 29 ರಂದು, ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಕರಡು ಸಮಿತಿಯನ್ನು ನೇಮಿಸಲಾಯಿತು. ಈ ಸಮಿತಿಯು ಸಂವಿಧಾನದ ಕರಡನ್ನು ಸಿದ್ಧಪಡಿಸಿ ನವೆಂಬರ್ 4, 1947 ರಂದು ವಿಧಾನಸಭೆಯಲ್ಲಿ ಮಂಡಿಸಿತು. ಇದನ್ನು ನವೆಂಬರ್ 26, 1949 ರಂದು ಅಂಗೀಕರಿಸಲಾಯಿತು ಮತ್ತು ಅನೇಕ ಪರಿಷ್ಕರಣೆಗಳು ಮತ್ತು ತಿದ್ದುಪಡಿಗಳ ನಂತರ, ಭಾರತದ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತೀಯ ಸ್ವಾತಂತ್ರ್ಯ ಚಳುವಳಿ, ಜನವರಿ 26, 1929 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಸ್ವರಾಜ್ಯವನ್ನು ಗುರಿಯಾಗಿಸಿಕೊಂಡಿತು. ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಮತ್ತು ದಿನವನ್ನು ಪೂರ್ಣ ಸ್ವರಾಜ್ ದಿನ ಎಂದು ಘೋಷಿಸಲಾಯಿತು. ಈ ಕಾರಣಕ್ಕಾಗಿಯೇ ಭಾರತದ ಸಂವಿಧಾನವನ್ನು ಸ್ವಾತಂತ್ರ್ಯದ ನಂತರ ಜನವರಿ 26. 1950 ರಂದು ಈ ದಿನದಂದು ಜಾರಿಗೆ ತರಲಾಯಿತು ಎಂದು ಮಕ್ಕಳಿಗೆ ಸಂಪೂರ್ಣವಾಗಿ ಸಂವಿಧಾನ ಕುರಿತು ಮಾತಾನಾಡಿದರು.
ಈ ಸಂದರ್ಭದಲ್ಲಿ ಶಾಲಾ ಸಹ ಶಿಕ್ಷಕ ಮಹಮ್ಮದ್ ರಫೀಕ್, ಶಂಕರಗೌಡ, ಪೂ. ಪಂಪನಗೌಡ ಪೊಲೀಸ್ ಪಾಟೀಲ್, ನರಸಿಂಹ, ಬಸವರಾಜ್, ಸಾವಿತ್ರಿ , ಮಲ್ಲನಗೌಡ, ಅಸ್ಮತ್ , ಲಕ್ಷ್ಮಿ, ಹುಲಿಗೆಮ್ಮ ಈರಮ್ಮ, ನರಸಮ್ಮ, ಅಂಜನಮ್ಮ, ಸೀತಮ್ಮ, ಸುರೇಶ್ ಸೆರಿದಂತೆ ವಿದ್ಯಾರ್ಥಿಗಳು ಶಾಲೆ SDMC ಅಧ್ಯಕ್ಷರು ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಊರಿನ ಮುಖಂಡರು ಉಪಸ್ಥಿತರಿದ್ದರು