ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂಜೆ ವೇಳೆಗೆ ಸಿಎಂ ಬೊಮ್ಮಾಯಿಯವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವದಾಗಿ ಹೇಳಿದ್ದಾರೆ. ಶಿವಮೊಗ್ಗದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಈಶ್ವರಪ್ಪ ಪಕ್ಷಕ್ಕೆ ಮುಜುಗರ ಆಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ನಾನು ತಪ್ಪು ಮಾಡಿದ್ರೆ ದೇವರು ಶಿಕ್ಷೆ ಕೊಡಲಿ. ಎಲ್ಲವನ್ನು ಎದುರಿಸಿ ಮುಕ್ತವಾಗಿ ಹೊರ ಬರುತ್ತೇನೆ. ಈ ವಿಚಾರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದಾರೆ.