ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೋರ್ವನ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬೆಂಗಳೂರಿನ HKBK ಕಾಲೇಜು ಬಳಿ ಘಟನೆ ನಡೆದಿದ್ದು, ಇಮ್ರಾನ್ ಶರೀಪ್ ಎನ್ನುವ ವ್ಯಕ್ತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಲಾಗಿದೆ. ಇನ್ನು ಗಾಯಗೊಂಡ ಇಮ್ರಾನ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋವಿಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.