ಸಿರುಗುಪ್ಪ: ದೇಶದ ಮಹಾನ್ ನಾಯಕರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟು 75ವರ್ಷ ಕಳೆದಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ 75 ಸ್ಥಳಗಲ್ಲಿ ನಮ್ಮ ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮವನ್ನು ಆಯ್ಕೆಮಾಡಿಕೊಳ್ಳಲಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ತಾಲೂಕಿನ ಪಾತ್ರವನ್ನು ಗುರುತಿಸಿರುವುದರಿಂದ ನಮ್ಮ ಭಾಗದಲ್ಲಿ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರನ್ನು ನೆನೆಯುವುದು ನಮ್ಮೆಲ್ಲರ ಭಾಗ್ಯವಾಗಿದೆ ಎಂದು ಹೇಳಿದರು.
ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಹಾಗೂ ವಿಶೇಷ ಉಪನ್ಯಾಸಕ ಆರ್.ಭೀಮಸೇನ ಮಾತನಾಡಿ, ತಾಲೂಕಿನ ಚಳ್ಳೆಕೂಡ್ಲೂರು ಗ್ರಾಮವು ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ಮಹನೀಯರ ತಾಣವಾಗಿರುವುದು ನಮ್ಮೆಲ್ಲರ ಭಾಗ್ಯ ಈ ಭಾಗದಲ್ಲಿ ಅಂದಿನ ರಜಾಕಾರರ ದಬ್ಬಾಳಿಕೆಯಿಂದ ಬೇಸತ್ತಿದ್ದ ರಾಯಚೂರು, ಬೀದರ್ ಮುಂತಾದ ಪ್ರದೇಶಗಳಿಗೆ ಸ್ವಾತಂತ್ರ್ಯ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದ ಪ್ರಮುಖರಿಗೆ ರಕ್ಷಣೆ ನೀಡಿರುವುದು ಈ ಗ್ರಾಮದ ಪಾತ್ರ ಮಹತ್ವದ್ದಾಗಿದೆ ಎಂದು ಚಳ್ಳೆಕೂಡ್ಲೂರು ಗ್ರಾಮದ ಇತಿಹಾಸವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.
ಕಾರ್ಯಕ್ರಮ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಮಳೆ ಪ್ರಾರಂಭವಾಗಿದ್ದರಿಂದ ಕಾರ್ಯಕ್ರಮ ಅಸ್ತವ್ಯಸ್ಥಗಾಗಿದ್ದು, ಪ್ರೇಕ್ಷಕರು ಕೆಲಹೊತ್ತು ಕುರ್ಚಿಗಳನ್ನು ತಲೆಯ ಮೇಲೆ ಹೊತ್ತು ಮಳೆಯಿಂದ ಆಶ್ರಯ ಪಡೆದರೆ, ಇನ್ನು ಕೆಲವರು ಮಳೆಯಲ್ಲಿ ನೆನೆಯ ಬೇಕಾಯಿತು. ಕೆಲ ಗಂಟೆಗಳ ನಂತರ ಮಳೆ ನಿಂತ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಬೆರಳೆಣಿಕೆಯಷ್ಟು ಪ್ರೇಕ್ಷಕರು ಮಾತ್ರ ಇದ್ದರು.
ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಆಯ್ಕೆಮಾಡಿಕೊಂಡಿದ್ದ ಚಳ್ಳೆಕೂಡ್ಲೂರು ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿಸೋಮಲಿಂಗಪ್ಪರಣ ಮಾಡಬೇಕಿತ್ತು. ಆದರೆ ಶಿಲಾಫಲಕ ಅನಾವಣ ಕಾರ್ಯಕ್ರಮ ನಡೆಯಲೇ ಇಲ್ಲ. ಆಗಸ್ಟ್ 15ರಂದು ಚಳ್ಳೇಕೂಡ್ಲೂರು ಗ್ರಾಮದಲ್ಲಿ ಶಿಲಾಫಲಕ ಅನಾವರಣ ಗೊಳಿಸುವುದಾಗಿ ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ತಿಳಿಸಿದ್ದಾರೆ.
ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮವೆಂಕಟರಾಮರೆಡ್ಡಿ, ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ತಾ.ಪಂ.ಇ.ಒ. ಎಂ.ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ಸಿಡಿಪಿಒ ಜಲಾಲಪ್ಪ, ಬಿಇಒ ಪಿ.ಡಿ.ಭಜಂತ್ರಿ, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್, ತಾ.ವೈದ್ಯಾಧಿಕಾರಿ ಡಾ.ಈರಣ್ಣ, ಬಿಸಿಎಂ ಇಲಾಖೆ ಅಧಿಕಾರಿ ಎ.ಗಾದಿಲಿಂಗಪ್ಪ, ಬಿಜೆಪಿ ತಾ.ಘಟಕದ ಅಧ್ಯಕ್ಷ ಪಂಪನಗೌಡ, ಯುವ ಘಟಕದ ಅಧ್ಯಕ್ಷ ಎಂ.ಎಸ್.ಸಿದ್ದಪ್ಪ, ಮುಖಂಡರಾದ ಎಂ.ವೀರೇಶ, ಮೋಹನ್‌ರೆಡ್ಡಿ, ಕೆ.ವೆಂಕಟರಾಮರೆಡ್ಡಿ, ಕೆ.ಮಲ್ಲಿಕಾರ್ಜುನ, ಅಬ್ದುಲ್‌ನಬಿ ಹಾಗೂ ವಿವಿಧ ಗ್ರಾಮಗಳ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು ಇದ್ದರು.