ರಸ್ತೆ ಚರಂಡಿ ಕಾಮಗಾರಿಯನ್ನು ವೀಕ್ಷಿಸಿದ ಶಾಸಕ ಎಂ ಆರ್ ಮಂಜುನಾಥ್
ಹನೂರು : ರಸ್ತೆ ಚರಂಡಿ ಕಾಮಗಾರಿ ಯಾವುದೇ ಲೋಪದೋಷವಿಲ್ಲದೆ ಗ್ರಾಮಸ್ಥರ ಸಹಕಾರ ಪಡೆದು ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಅಧಿಕಾರಿಗಳು ಕ್ರಮ ವಹಿಸಬೇಕು ಮತ್ತು ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಶಾಸಕ ಎಂ ಆರ್ ಮಂಜುನಾಥ್ ಇಂಜಿನಿಯರ್ ಚಿನ್ನಣ್ಣ ಮತ್ತು ಮಹೇಶ್ ಅವರಿಗೆ ಸೂಚನೆ ನೀಡಿದರು.
ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಪಿಡಬ್ಲ್ಯೂಡಿ ಅಭಿವೃದ್ಧಿಯಡಿಯಲ್ಲಿ ನಡೆಯುತ್ತಿರುವ ಸುಮಾರು 4.40 ಕೋಟಿ ವೆಚ್ಚದಲ್ಲಿ 1800 ಮೀಟರ್ ವಿಸ್ತೀರ್ಣದ ರಸ್ತೆ ಹಾಗೂ ಒಳಚಂಡಿ ಕಾಮಗಾರಿಯನ್ನು ಪರಿಶೀಲಿಸಿ ಹೇಳಿದರು.
ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ ಚಿನ್ನನ್ ಹಾಗೂ ಮಹೇಶ್ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ : ಚೇತನ್ ಕುಮಾರ್ ಎಲ್, ಹನೂರಿ ತಾಲ್ಲೂಕು, ಚಾಮರಾಜನಗರ ಜಿಲ್ಲೆ,