ಜ.6ರಂದು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ
ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ
ವಿಜಯಪುರ, ಜ.05 :ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ, ಶಿಕ್ಷಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಮಾ ಕಂಪನಿಗಳು, ಎನ್.ಜಿ.ಒ ಸಂಸ್ಥೆಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರ ಸಹಯೋಗದಲ್ಲಿ ರಸ್ತೆ ಸುರಕ್ಷತೆ,ಜೀವನ ರಕ್ಷೆ ಎಂಬ ಘೋಷ ವಾಕ್ಯದಡಿ ದಿನಾಂಕ 31-01-2026ರವರೆಗೆ ನಡೆಯುವ ರಸ್ತೆ ಸುರಕ್ಷತಾ ಅಭಿಯಾನ ಮತ್ತು ಕಾನೂನು ಅರಿವು- ನೆರವು ಉದ್ಘಾಟನಾ ಕಾರ್ಯಕ್ರಮವು ಜ.6ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.45 ಗಂಟೆಗೆ ನಡೆಯಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ ಅವರು ನೆರೆವರಿಸಲಿದ್ದು,
ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ, ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ, ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸೀಂಬಾಬಾ ಮುದ್ದೇಬಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತಕುಮಾರ ಎಂ. ಗುಣಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಎಸ್. ಪೊಲೀಸ್ ಪಾಟೀಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ವಿಜಯ ಪಾಟೀಲ, ಎನ್‌ಎಚ್‌ಎಐ ಬಾಗಲಕೋಟೆ ವಿಭಾಗದ ಪವನ ಗುರುವೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಚಂದ್ರಶೇಖರ ಹೊಸಮನಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿರಯ್ಯ ಸಾಲಿಮಠ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಇವರು ಭಾಗವಹಿಸಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.















