ರಸ್ತೆ ಸುರಕ್ಷತಾ ಮಾರಾಷ್ಟ್ರೀಯಸ: ಪಟ್ಟಣದಲ್ಲಿ ಜಾಗೃತಿ ಅಭಿಯಾನ.
ಮುದ್ದೇಬಿಹಾಳ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸ್ ನಿಲ್ದಾಣ ಹಾಗೂ ಪುರಸಭೆ ಹತ್ತಿರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.
ಈ ವೇಳೆ ಅಪರಾಧ ವಿಭಾಗದ ಪಿಎಸ್ಐ ರಂಗಪ್ಪ ಬಂಗಿ ಮಾತನಾಡಿ, ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಧರಿಸಬೇಕು, ವೇಗಮಿತಿಯನ್ನು ಪಾಲಿಸಬೇಕು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂದು ಸಾರ್ವಜನಿಕರಿಗೆ ತಿಳಿಸಿದರು. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಡೆಯಲು ಸಾಧ್ಯವಾಗುತ್ತದೆ.
ಜಾಗೃತಿ ಅಭಿಯಾನದಲ್ಲಿ ಸಂಚಾರ ನಿಯಮಗಳ ಬಗ್ಗೆ ಘೋಷಣೆಗಳನ್ನು ಕೂಗುವ ಮೂಲಕ ಜನರಿಗೆ ಅರಿವು ಮೂಡಿಸಲಾಯಿತು. ತಪ್ಪಾದ ಚಾಲನೆಯಿಂದ ಉಂಟಾಗುವ ಅಪಾಯಗಳು, ಜೀವಹಾನಿ ಮತ್ತು ಆರ್ಥಿಕ ನಷ್ಟಗಳ ಕುರಿತು ವಿವರಿಸಿ, ಸುರಕ್ಷಿತ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಪ್ರಕಾಶ್ ಪೂಜಾರಿ, ಸಂಗಮೇಶ ಛಲವಾದಿ ಸೇರಿದಂತೆ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.
ರಸ್ತೆ ಸುರಕ್ಷತಾ ಸಂದೇಶಗಳನ್ನು ಸಾರ್ವಜನಿಕರಿಗೆ ಅಭಿಯಾನಕ್ಕೆ ಪಟ್ಟಣದ ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
















