RRB Recruitment 2024 : 9144 ಟೆಕ್ನಿಷಿಯನ್ ಹುದ್ದೆಗಳಿಗೆ, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನ
Voice Of Janata DesK News : ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಮಾರ್ಚ್ 9ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಎಲ್ಲದರ ಕುರಿತಾಗಿ ಮಾಹಿತಿ.
ಹುದ್ದೆಯ ಮಾಹಿತಿ:
ಟೆಕ್ನಿಷಿಯನ್ ಗ್ರೇಡ್-1- 1092
ಟೆಕ್ನಿಷಿಯನ್ ಗ್ರೇಡ್-3- 8052
ಶೈಕ್ಷಣಿಕ ಮಾಹಿತಿ
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ
ಫಿಜಿಕ್ಸ್/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಐಟಿ/ಇನ್ಸ್ಟ್ರುಮೆಂಟೇಶನ್ನಲ್ಲಿ ಬಿ.ಎಸ್ಸಿ, ಡಿಪ್ಲೊಮಾ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ
SC/ST & ಮಹಿಳಾ ಅಭ್ಯರ್ಥಿಗಳು- 250 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ