ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಎಂಆರ್ ಮಂಜುನಾಥ್ ರಿಂದ ಚಾಲನೆ
ಹನೂರು: ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಚಾಮರಾಜನಗರ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ಕ್ರೀಡಾಕೂಟಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಸಕ ಎಂ ಆರ್ ಮಂಜುನಾಥ್ ಅವರು ಮಾತನಾಡಿ ನಮ್ಮ ಕ್ಷೇತ್ರದಲ್ಲಿ ಹೆಚ್ಚು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು. ಅಧಿಕಾರಿಗಳು ಕ್ರೀಡೆಗೆ ಹೆಚ್ಚು ಒತ್ತನ್ನು ನೀಡಬೇಕು. ಕ್ರೀಡಾಪಟುಗಳಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಈ ಗ್ರಾಮೀಣ ಕ್ರೀಡಾಕೂಟದಲ್ಲಿ ಕೊಕ್ಕೋ, ವಾಲಿಬಾಲ್ ,ಹಗ್ಗ ಜಗ್ಗಾಟ ಮತ್ತು ತ್ರೋಬಾಲ್ ಮುಂತಾದ ಕ್ರೀಡೆಗಳನ್ನು ಯುವಜನ ಸೇವಾ ಕ್ರೀಡಾ ಇಲಾಖೆ ಆಯೋಜಿಸಿದ್ದು ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವು ಸಹಜ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು ಎಂದು ತಿಳಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಶಿವಸ್ವಾಮಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಕ್ರೀಡಾ ಇಲಾಖೆ ಚಾಮರಾಜನಗರ, ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀಮತಿ ಪವಿತ್ರ, ಆನಂದ್ ಕುಮಾರ್, ಮಹದೇವ್ ದೈಹಿಕ ಶಿಕ್ಷಕಸಂಯೋಜಕರು. ಕೆಂಪರಾಜು ದೈಹಿಕ ಶಿಕ್ಷಕಸಂಯೋಜಕರು,ಜೆಡಿಎಸ್ ಮುಖಂಡ ಮಂಜೇಶ್ ಹಾಗೂ ದೈಹಿಕ ಶಿಕ್ಷಕರು,ಕ್ರೀಡಾ ಪ್ರೇಮಿಗಳು ಹಾಜರಿದ್ದರು.
ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.