ವಾಷಿಂಗ್ಟನ್: ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಖಂಡಿಸಿ ಅಮೆರಿಕ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಇಬ್ಬರು ಪುತ್ರಿಯರ ಮೇಲೆ ದಿಗ್ಬಂಧನ ವಿಧಿಸಿದೆ. ಇದೇ ಮೊದಲ ಬಾರಿಗೆ ವೈಯಕ್ತಿಕ ಮಟ್ಟದಲ್ಲಿ ಈ ರೀತಿಯ ದಿಗ್ಬಂಧನ ಹೇರಲಾಗಿದೆ. ಪುಟಿನ್ ಅವರ ಅಪಾರ ಸಂಪತ್ತು ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಇದೆ ಎಂಬುದು ತಿಳಿದಿದೆ. ಈ ಹಿನ್ನಲೆಯಲ್ಲಿ ಈ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಮೆರಿಕದ ಶ್ವೇತ ಭವನದಿಂದ ಮಾಹಿತಿ ತಿಳಿದು ಬಂದಿದೆ.