ಡಿ – 29 ರಂದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಸಿಂದಗಿ : ಡಿ – 29 ರಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆಯಲ್ಲಿ ಸಾಯಂಕಾಲ 4ಗಂಟೆಗೆ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲೂಕು ಮಟ್ಟದ ಅಧಿಕಾರಿಗಳು, ಕವಿಗಳು, ಸಾಹಿತಿಗಳು, ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ತಿಳಿಸಿದ್ದಾರೆ.