ಮುದ್ದೇಬಿಹಾಳ: ಪಟ್ಟಣದ ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್ ಸಂಸ್ಥೆಗಳ ವಿದ್ಯಾರ್ಥಿಗಳು 2025-26ನೇ ಸಾಲಿನ ಸೈನಿಕ ಶಾಲೆಯ ಅಖಿಲ ಭಾರತ ಪ್ರವೇಶ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ತಾಲೂಕಿನ ಹೆಮ್ಮೆ ಹೆಚ್ಚಿಸಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿ ಯಶಸ್ ಶಿವಾನಂದ ಬೇಲಾಳ (ಸಾ, ಬಸರಕೋಡ) 300ರಲ್ಲಿ 275 ಅಂಕಗಳನ್ನು ಗಳಿಸಿ ಅಖಿಲ ಭಾರತ ರ್ಯಾಂಕಿಂಗ್ನಲ್ಲಿ 974ನೇ ಸ್ಥಾನ ಪಡೆದಿದ್ದು, ಕರ್ನಾಟಕ ರಾಜ್ಯಕ್ಕೆ 14ನೇ ರ್ಯಾಂಕ್ ತಂದು ಕೊಟ್ಟಿದ್ದಾನೆ. ಈ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇದೇ ವೇಳೆ ಫಯಾಜ್ ಅಹ್ಮದ್ ಸಂಕನಾಳ 300ರಲ್ಲಿ 255 ಅಂಕಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾನೆ. ಅನನ್ಯಾ ಗೌರೋಜಿ 300ರಲ್ಲಿ 246 ಅಂಕಗಳನ್ನು ಗಳಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾಳೆ. ವಸಂತ ಎಂ. ಇವಣಗಿ 300ರಲ್ಲಿ 228 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಇತರ ವಿದ್ಯಾರ್ಥಿಗಳೂ ಉತ್ತಮ ಅಂಕಗಳನ್ನು ಪಡೆದು ಸಂಸ್ಥೆಯ ಕೀರ್ತಿಗೆ ಮತ್ತಷ್ಟು ಮೆರಗು ತಂದಿದ್ದಾರೆ.
ಸಂಸ್ಥೆಯ ಮುಖ್ಯಸ್ಥರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದು ನಮ್ಮ ಧ್ಯೇಯವಾಗಿದ್ದು, ಶಿಸ್ತುಬದ್ಧ ತರಗತಿಗಳು, ಅನುಭವಸಂಪನ್ನ ಶಿಕ್ಷಕರ ಮಾರ್ಗದರ್ಶನ ಮತ್ತು ನಿಯಮಿತ ಮಾದರಿ ಪರೀಕ್ಷೆಗಳ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
2026-27ನೇ ಸಾಲಿನ ಪ್ರವೇಶಕ್ಕಾಗಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪೋಷಕರು ಇಂದೇ ಸಂಪರ್ಕಿಸಬಹುದಾಗಿದೆ. ಶಾಲೆಯು ಮುದ್ದೇಬಿಹಾಳ ಪಟ್ಟಣದ 7ನೇ ಕ್ರಾಸ್, ಹುಡೋ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.