ಮಸ್ಕಿ: ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಲದೊಡ್ಡಿ ಗ್ರಾಮದ ರೈತ ಹುಲುಗಪ್ಪ (40) ತಂದೆ ಭೀಮಪ್ಪ ಎಂಬ ವ್ಯಕ್ತಿಯು ಸಾಲ ಬಾಧೆ ತಾಳಲಾರದೆ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆಸಿದೆ. ರೈತ ಹುಲುಗಪ್ಪ ನಿನ್ನೆ ರಾತ್ರಿ ಭತ್ತಕ್ಕೆ ನೀರು ಹಾಯಿಸಲು ಜಮೀನಿಗೆ ತೆರಳಿದ ವೇಳೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ರೈತ ಹುಲುಗಪ್ಪ ವಿವಿಧ ಬ್ಯಾಂಕುಗಳಲ್ಲಿ 7 ಲಕ್ಷ 50 ಸಾವಿರ ರೂ. ಗಳ ಸಾಲ ಮಾಡಿದ್ದ ಎನ್ನಲಾಗುತ್ತಿದೆ. ಸಾಲದ ಒತ್ತಡಕ್ಕೆ ಮನನೊಂದು ಕಾಲುವೆಗೆ ಹಾರುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಹುಲುಗಪ್ಪನಿಗೆ ಒಂದು ಹೆಣ್ಣು ಮಗು ಹಾಗೂ ಇಬ್ಬರು ಪುತ್ರರಿದ್ದಾರೆ. ಇತ್ತ ಪತಿಯನ್ನು ಕಳೆದುಕೊಂಡ ಪತ್ನಿ ಕುಟುಂಬದ ಜವಾಬ್ದಾರಿಯನ್ನು ಹೇಗೆ ನಿಭಾಯಿಸುವದೆಂದು ಕಣ್ಣೀರಿಡುತ್ತಿದ್ದಾರೆ. ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ ಸರ್ಕಾರ ಹಾಗೂ ತಾಲೂಕು ಆಡಳಿತ ಸಹಾಯ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.