ಅಂಗನವಾಡಿ ಕೇಂದ್ರ,ವಿವಿಧ ವಸತಿ ನಿಲಯ, ವಸತಿ ಶಾಲೆಗೆ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬೇಟಿ
ವಿಜಯಪುರ: ಧಾರವಾಡ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ವಿಜಯಪುರ ನಗರದ ಅಂಗನವಾಡಿ ಕೇಂದ್ರ,ವಿವಿಧ ವಸತಿ ನಿಲಯ, ವಸತಿ ಶಾಲೆ ಹಾಗೂ ಪ್ರಾಥಮಿಕ ಶಾಲೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆ ಹಾಗೂ ಕಾರ್ಯ ವೈಖರಿಯ ಕುರಿತು ಪರಿಶೀಲನೆ ನಡೆಸಿ ,ಅಗತ್ಯ ಸಲಹೆ ಸೂಚನೆ ನೀಡಿದರು.ಎಸ್ ಎಸ್ ಎಲ್ ಸಿಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಪರೀಕ್ಷೆ ,ಪರೀಕ್ಷಾ ಸಿದ್ಧತೆ ಇತ್ಯಾದಿ ವಿಷಯ ಕುರಿತಾಗಿ ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಜೀವನದ ಶೈಕ್ಷಣಿಕ ಹಂತದ ಘಟ್ಟವಾಗಿದೆ.ದಿನನಿತ್ಯ ಶಾಲೆಗೆ ಹಾಜರಾಗಿ,ಪಾಠ ಬೋಧನೆಯನ್ನು ನಿರಂತರತೆಯೊಂದಿಗೆ ಕೇಳುವುದರಿಂದ ವಿಷಯ ಕರಗತವಾಗಿ,ಮನನವಾಗುತ್ತದೆ.
ಓದಿನೊಂದಿಗೆ ಬಿಡುವು ಮಾಡಿಕೊಂಡು ಆಟೋಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಸಾಧಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ಚಟುವಟಿಕೆಯಿಂದಿರಬೇಕು ಎಂದು ಹೇಳಿದರು.ಓದಿದ ವಿಷಯ ಮನನ ಮಾಡಿಕೊಂಡು, ಬಹಳಷ್ಟು ವಿಷಯಗಳ ಅರಿತುಕೊಳ್ಳಬೇಕು. ಜೀವನದಲ್ಲಿ ಗುರಿ ನಿಗದಿಪಡಿಸಿಕೊಂಡು ಸತತ ಪರಿಶ್ರಮದ ಮೂಲಕ ಸಾಧನೆ ಮಾಡಿ ಎಂದು ಹೇಳಿದರು.ಅಂಗನವಾಡಿ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳಿಗೆ ದೈನಂದಿನ ಮೆನುವಿನಂತೆ ಗುಣಮಟ್ಟದ ಆಹಾರ ವಿತರಿಸುವಂತೆ ಹಾಗೂ ಮಕ್ಕಳ ಸ್ನೇಹಿಯಾದ ವಾತಾವರಣ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅನಿರೀಕ್ಷಿತವಾಗಿ ಅಂಗನವಾಡಿ ಮತ್ತು ಶಾಲೆಗಳಿಗೆ ಭೇಟಿ ನೀಡಿ,ಈ ಸಂದರ್ಭದಲ್ಲಿ ಕಂಡುಬAದ ನ್ಯೂನ್ಯತೆಗಳ ಪಟ್ಟಿ ಮಾಡಿ ಸರಿಪಡಿಸುವಂತೆ ಸಂಬoಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳ ಹಿತ ದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಆಧಿಕಾರಿಗಳಿಗೆ ತಿಳಿಸಿದರು. ಸ್ವಚ್ಛತೆ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡಬೇಕು.ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ ಚವ್ಹಾಣ, ವಿಜಯಪುರ ತಹಸೀಲ್ದಾರ್ ಪ್ರಶಾಂತ್ ಚನಗೊಂಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ್ ಪೂಜಾರಿ, ಶಾಲಾ ಶಿಕ್ಷಣ ಇಲಾಖೆಯ ದಳವಾಯಿ ಹಾಗೂ ಜಿಲ್ಲಾಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.