ರಾಯಚೂರು :ಕೋವಿಡ್-19ರ ಹಿನ್ನೆಲೆಯಲ್ಲಿ ಇದೇ ಡಿ. 29ರಂದು ವಿಶ್ವಮಾನವ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಹಾಗೂ ಅಮರ ಶಿಲ್ಪಿ ಜಕಣಾಚಾರಿ ಅವರ ಜಯಂತಿ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿ.29 ರಂದು ವಿಶ್ವಮಾನವ ಕುವೆಂಪು ಅವರ ಜಯಂತಿ ಹಾಗೂ ಜ.01ರ ಬೆಳಿಗ್ಗೆ 10.30ಕ್ಕೆ ಅಮರ ಶಿಲ್ಪಿ ಜಕಣಾಚಾರಿ ಅವರ ಜಯಂತಿಯನ್ನು ನಗರದ ಪಂಡಿತರ ಜಂಬಲದಿನ್ನಿ ರಂಗ ಮಂದಿರದಲ್ಲಿ ಕುವೆಂಪು, ಜಣಾಚಾರರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮುಖಾಂತರ ಆಚರಣೆ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ನಾಯಕ್, ಭಾರತೀಯ ರೆಡ್ ಕ್ರಾಸ್ ಶಿಕ್ಷಣ ಸಮಿತಿಯ ಸಂಚಾಲಕರಾದ ಡಾ.ದಂಡಪ್ಪ ಬಿರಾದರ್, ವಿವಿಧ ಸಾಹಿತ್ಯಗಳು,ವಿವಿಧ ಸಮಾಜದ ಮುಖಂಡರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.