ವಿಜಯಪುರ : ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದು ಕಾಂಗ್ರೆಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದರು.
ವಿಜಯಪುರ ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಹುದಿನದ ಬೇಡಿಕೆಯನ್ನು ಈಡೇರಿಸುವ ಮೂಲಕ ಬಿಜೆಪಿ ಸಾಮಾಜಿಕ ನ್ಯಾಯದ ಪರ ಇದೆ ಎಂಬುದನ್ನು ಸಾಬೀತು ಪಡಿಸಿದೆ. ಇದರಿಂದ ಕಾಂಗ್ರೆಸ್ ಹತಾಶಗೊಂಡಿದೆ. ಇನ್ನೂ ಸಂಸತ್ತಿನಲ್ಲಿ ಅನುಮೋದನೆಯಾಗಿ ರಾಷ್ಟ್ರ ಪತಿ ಅಂಕಿತ ಬೀಳಬೇಕೆಂಬ ಹತಾಶದ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಹುಮತ ಪಡೆದ ಬಿಜೆಪಿ ಪಕ್ಷವೇ ಅಧಿಕಾರದಲ್ಲಿದ್ದು ಸುಲಭವಾಗಿ ಅನುಮೋದನೆ ಸಿಗಲಿದೆ. ಆ ಬಗ್ಗೆ ಆತಂಕ ಬೇಡ ಎಂದರು.