ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ ವಿವರ
ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಫೆ.16 ರಿಂದ 18ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ.16 ರಂದು ಸಂಜೆ 4ಗಂಟೆಗೆ ಜಿಲ್ಲೆಯ ನಿಡಗುಂದಿಗೆ ಆಗಮಿಸಿ, ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಫೆ.17ರಂದು ಬೆಳಿಗ್ಗೆ 10 ಗಂಟೆಗೆ ಇಂಡಿ ತಾಲೂಕಿನಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಜಯಪುರ ನಗರದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಹಂದಿಜೋಗಿ ಜನಾಂಗದ
ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ 5 ಗಂಟೆಗೆ ವಿಜಯಪುರ ನಗರದ ಕುಂಚಿ ಕೊರವ ಕಾಲನಿಗೆ ಭೇಟಿ ನೀಡಿ ಕುಂಚಿ ಕೊರವ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ನಂತರ ಸಿಂದಗಿ ತಾಲೂಕಿನ ಶಿವಣಗಿ ಗ್ರಾಮದಲ್ಲಿ ಶರಣ ಶ್ರೀ ನುಲಿಯ ಚಂದಯ್ಯನವರ ಜನ್ಮ ಸ್ಥಳ ವೀಕ್ಷಣೆ ಮಾಡಿ, ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಫೆ.18ರಂದು ಬೆಳಿಗ್ಗೆ 9 ಗಂಟೆಗೆ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾಮಾನ್ಯ ಅಲೆಮಾರಿ ಸಮುದಾಯದ ಜನರಿಂದ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ, ಬೆಳಿಗ್ಗೆ 10-30ಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಸಂಜೆ 5-30ಕ್ಕೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.