ಇಂದು ಶಾಲಾ ಕಾಲೇಜುಗಳಿಗೆ ರಜೆ..! ಏಕೆ..?
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಗುರುವಾರ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣ ಅಂಗನವಾಡಿ, ಶಾಲಾ ಕಾಲೇಜಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ. ಪದವಿ, ಇಂಜಿನೀಯರಿಂಗ್ ಮೆಡಿಕಲ್ ಸೇರಿದಂತೆ ಇತರೆ ಕಾಲೇಜು ಹಾಗೂ ವಿವಿಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.