ವಿಜಯಪುರ : ಶಾಲಾ ವಿದ್ಯಾರ್ಥಿಗಳ ಬಿಸಿಯೂಟದ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಆರೋಪ ಹಿನ್ನೆಲೆ ಬಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಸ್ಥರು ವಾಹನ ತಡೆದು ಆಕ್ರೋಶ ಹೊರಹಾಕಿದ್ದರು.
ಶಾಲಾ ಮುಖ್ಯಶಿಕ್ಷಕ ಶರಣಪ್ಪ ಬಿದನೂರ ಬಿಸಿಯೂಟದ ಅಕ್ಕಿ ಸಾಗಾಟ ಮಾಡಿ ಮಾರಾಟ ಮಾಡುತ್ತಾರೆಂದು ಗ್ರಾಮಸ್ಥರು ಆರೋಪ ಮಾಡಿದ್ದರು. ಬಿಇಒ ಎಸ್.ಎಸ್. ನಾಗನೂರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮಸ್ಥರ ಬಳಿ ಮಾಹಿತಿ ಕಲೆ ಹಾಕಿದರು. ಈ ವೇಳೆ
ಮುಖ್ಯಶಿಕ್ಷಕ ಶರಣಪ್ಪ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರ ಒತ್ತಾಯಿಸಿದರು.