ಲಿಂಗಸೂಗೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಎಕ್ಸಪರ್ಟ್ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯತು.
ವಿದ್ಯಾರ್ಥಿಗಳು ವಿವಿಧ ಬಗೆಯ ವಿಜ್ಞಾನ ವಸ್ತುಗಳನ್ನು ಪ್ರದರ್ಶನ ಮಾಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಮಕ್ಕಳು ಹಾಗೂ ಶಿಕ್ಷಕರು ಸೇರಿ ಆಚರಿಸಿದರು. ಇನ್ನು ಮಕ್ಕಳು ಬಗೆ ಬಗೆಯ ಚಿತ್ರಗಳನ್ನು
ಬಿಡಿಸಿ ವಸ್ತು ಪ್ರದರ್ಶನ ಮಾಡಿದರು. ಉತ್ತಮ ಚಿತ್ರಗಳನ್ನು ಬಿಡಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಗದರ್ಶಕರಾದ G V ಕೆಂಚನಗುಡ್ಡ, ನಿವೃತ್ತ ಉಪನ್ಯಾಸಕರು ವಿಸಿಬಿ ಕಾಲೇಜು ಹಾಗೂ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.