ಎಸ್ಸಿಪಿ-ಟಿಎಸ್ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ
ವಿಜಯಪುರ ಸೆ.18: ಎಸ್ಸಿಪಿ ಟಿಎಸ್ಪಿ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು. ಎಸ್ಸಿಪಿ ಟಿಎಸ್ಪಿ ಅನುದಾನ ಉಳಿಕೆಯಾಗದಂತೆ ನೋಡಿಕೊಂಡು ಅನುದಾನ ಸದ್ಭಳಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಆಗಸ್ಟ್ -2025ರ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಬಡಜನರ ಆರ್ಥಿಕ ಅಭ್ಯುದಯಕ್ಕಾಗಿ ವಿವಿಧ ಇಲಾಖೆಗಳಲ್ಲಿರುವ ಜಾರಿಗೊಳಿಸುತ್ತಿರುವ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳು ಪಡೆದುಕೊಳ್ಳಲು ಯೋಜನೆಗಳ ಸಮಗ್ರ ಮಾಹಿತಿಯನ್ನು ಒದಗಿಸಬೇಕು. ಈ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಸಬಲಗೊಳ್ಳಲು ಸಮರ್ಪಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಿ, ಹೆಚ್ಚೆಚ್ಚು ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸಿ, ಎಸ್ಸಿಪಿ ಟಿಎಸ್ಪಿ ಅನುದಾನ ಸದ್ಬಳಕೆ ಮಾಡುವ ಮೂಲಕ ಯೋಜನೆಯ ಉದ್ದೇಶ ಈಡೇರಿಸಬೇಕು. ಆರ್ಥಿಕ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು ಯಾವುದೇ ಕಾರಣಕ್ಕೂ ಎಸ್ಸಿಪಿ-ಟಿಎಸ್ಪಿ ಅನುದಾನ ಉಳಿಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಆಯುμï ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಮಹತ್ವದ ಕುರಿತು ತಿಳಿ ಹೇಳುವ ಹಾಗೂ ಕಾಲಕಾಲಕ್ಕೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು.ಮೀನುಗಾರಿಕೆ ವೃತ್ತಿಯಲ್ಲಿ ನೂರಾರು ಕುಟುಂಬಗಳು ತೊಡಗಿಸಿಕೊಂಡಿಸಿವೆ. ಇಂತಹ ಅರ್ಹ ಫಲಾನುಭವಿಗಳಿಗೆ ಲೈವ್ ಜಾಕೆಟ್ ಸೇರಿದಂತೆ ಅಗತ್ಯ ಪೂರಕ ಪರಿಕರಗಳನ್ನು ಒದಗಿಸುವ ಕ್ರಿಯಾ ಯೋಜನೆ ರಾಜ್ಯಮಟ್ಟದ ಹಂತದಲ್ಲಿದ್ದು, ಶೀಘ್ರವಾಗಿ ಪರಿಕರಗಳನ್ನು ಫಲಾನುಭವಿಗಳಿಗೆ ವಿತರಿಸಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆಯ ಮೂಲಕ ಅನುμÁ್ಠನಗೊಳಿಸುತ್ತಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ವಸತಿ ಶಾಲೆ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೂ ಅವಕಾಶ ಒದಗಿಸಬೇಕು. ಮೊಬೈಲ್ ಕ್ಯಾಂಟಿನ್ ವಾಹನ, ಕೌಶಲ್ಯಾಭಿವೃದ್ದಿ ತರಬೇತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.
ತೋಟಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪರಂಪರಾಗತ ಕೃಷಿ ವಿಕಾಸ ಯೋಜನೆ ಹಾಗೂ ರಾಷ್ಟ್ರೀಯ ಎಣ್ಣೆ ಕಾಳು ಮತ್ತು ಎಣ್ಣೆ ತಾಳೆ ಅಭಿಯಾನ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಪರಿಶಿಷ್ಟ ಪಂಗಡದ ಅರ್ಹ ರೈತರಿಗೆ ನಿರ್ದಿಷ್ಟ ಅವಧಿಯಲ್ಲಿ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿಗದಿತ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ಸಾಧಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ, ರೇಷ್ಮೆ, ಪಶು ಸಂಗೋಪನಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಕೋಶ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


















