ಹಂಗಾಮಿನ ಬೆಳೆ, ಸಮೀಕ್ಷೆ ಆಪ್ ನಲ್ಲಿ ದಾಖಲಿಸಿ :ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ
ಇಂಡಿ : ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು ರೈತರು ತಾವು ಬೆಳೆದ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೋ ಸ್ಟೋರ್ ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ ೨೦೨೪ ಅನ್ನು ಡೌನಲೋಡ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕು ಎಂದು ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ ತಿಳಿಸಿದ್ದಾರೆ.
ಪಟ್ಟಣದ ಕದೃಷಿ ಉಪನಿರ್ದೇಶಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರು ತಮ್ಮ ಬೆಳೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ, ಪ್ರವಾಹ ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ಅನುಕೂಲವಾಗಲಿದೆ.
ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಸಮೀಕ್ಷೆ ಆಪ್ ನಲ್ಲಿ ದಾಖಲಿಸಿ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ರೈತರು ಕಂದಾಯ ಕೃಷಿ ತೋಟಗಾರಿಕೆ ರೇಷ್ಮೆ, ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪವಾರ ತಿಳಿಸಿದ್ದಾರೆ.
ಚಂದ್ರಕಾಂತ ಪವಾರ ಭಾವಚಿತ್ರ



















