ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ..! ಕನ್ನಡ ಚಿತ್ರರಂಗ ಮೀಡಿದ ಕಂಬನಿ
Voiceofjanata: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಏ- 14 ರಂದು ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ.
ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಬೆಂಗಳೂರಿನಲ್ಲಿ ಜನಿಸಿದರು. 1985ರಲ್ಲಿ ಪಿತಾಮಹ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಅಲ್ಲದೆ, ಬೆಟ್ಟದ ತಾಯಿ, ಪೊಲೀಸ್ ಹೆಂಡತಿ, ತರ್ಲೆ ನನ್ಮಗ ಹೀಗೆ ಹಲವು ಚಿತ್ರಗಳಲ್ಲಿ ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಕಾಣಿಸಿಕೊಂಡಿರಲಿಲ್ಲ. 2022ರ ಮಠ ಹಾಗೂ 2023ರ ಉಂಡೇನಾಮ ಚಿತ್ರದಲ್ಲಿ ನಟಿಸಿದ್ದರು.
ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು ದೊಡ್ಡಣ್ಣ, ಟೆನ್ನಿಸ್ ಕೃಷ್ಣ ಅವರೊಂದಿಗೆ ಅಷ್ಟೇ ಅಲ್ಲದೆ, ನಳಿಕ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್ ಪ್ರಕಾಶ್ ಸೇರಿದಂತೆ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು.
ಜನಾರ್ಧನ್ ಅವರಿಗೆ ಬ್ಯಾಂಕ್ ಜನಾರ್ಧನ್ ಎಂದು ಹೆಸರು ಬರಲು ಕಾರಣ ಏನೆಂದರೆ, ಅವರು ಚಿತ್ರದುರ್ಗದ ಸಮೀಪದ ಹೊಳಲ್ಕೆರೆ ಬಳಿಯ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಆಗಲೇ, ಅವರಿಗೆ ಕಲೆಯ ಬಗ್ಗೆ ಆಸಕ್ತಿ ಇತ್ತು. ಆದ್ದರಿಂದ ನಾಟಕಗಳನ್ನು ಮಾಡಿಕೊಂಡಿದ್ದರು.



















