ಇಂಡಿ : ಶಾಲೆಯ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳ ಪಾಲಕರು ಶಾಲೆಯ ಎದುರು ಪ್ರತಿಭಟನೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಗೊರನಾಳನಲ್ಲಿರುವ ಸರ್ಕಾರಿ ಪ್ರೌಢ ಶಾಲೆಯ ಎದುರು ನಡೆದಿದೆ.
ಗೊರನಾಳನಲ್ಲಿರುವ ಸರ್ಕಾರಿ ಪ್ರೌಢ ಶಾಲೆಯ ಆಡಳಿತ ಮಂಡಳಿ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಅಲ್ಲದೇ, ಶಿಕ್ಷಕರು ಶಾಲೆಗೆ ಚಕ್ಕರ್ ಹೊಡೆದು ಪಗಾರ್ ಮಾತ್ರ ಸೀಮಿತರಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಅದಕ್ಕಾಗಿ ತಕ್ಷಣವೇ ಶಿಕ್ಷಣ ಇಲಾಖೆನವರು ಶಾಲೆಯ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.