ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರ ಈ.ಹೆಬ್ಬಾಳ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.
ಇಲ್ಲಿನ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಸರ್ವ ಸದಸ್ಯರು ಈ ಆಯ್ಕೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.
ಸಂಘದ ಈ ಹಿಂದಿನ ಅಧ್ಯಕ್ಷರಾಗಿದ್ದ ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಿರ್ದೇಶಕ ಶಂಕರ ಹೆಬ್ಬಾಳ ಅವರನ್ನು ಅಧ್ಯಕ್ಷರಾಗಿ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ತಿಳಿಸಿದರು.
ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಅವರ ಪುತ್ರ ಚಂದ್ರಕಾಂತ ಹೆಬ್ಬಾಳ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಸುಭಾಷ ರುದ್ರಗಂಟಿ, ಉಮೇಶ ಪ್ಯಾಟಿಗೌಡರ, ದ್ಯಾವಪ್ಪ ಹುಣಶ್ಯಾಳ, ಬಸಪ್ಪ ಹುಣಶ್ಯಾಳ,ಬಸವರಾಜ ಅಗಸಬಾಳ,ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ,ಚಂದ್ರಕಾಂತ ಹೆಬ್ಬಾಳ ಇದ್ದರು.ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ನಿರೂಪಿಸಿ ವಂದಿಸಿದರು.ಅಗಲಿದ ಹಿಂದಿನ ಅಧ್ಯಕ್ಷ ಬಸಪ್ಪ ಹೆಬ್ಬಾಳ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.
ಮುದ್ದೇಬಿಹಾಳದಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ಆರಂಭಗೊಂಡಿರುವ ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ನನ್ನನ್ನು ಆಯ್ಕೆ ಮಾಡಿರುವ ಸರ್ವ ಆಡಳಿತ ಮಂಡಳಿ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ನನ್ನ ಅವಧಿಯಲ್ಲಿ ಸಂಘದ ಗ್ರಾಹಕರು,ಶೇರುದಾರರ ವಿಶ್ವಾಸ ವೃದ್ಧಿಸಿ ಸಿಬ್ಬಂದಿಯ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
–ಶಂಕರ ಈ.ಹೆಬ್ಬಾಳ,ಅಧ್ಯಕ್ಷ, ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘ