ಮುದ್ದೇಬಿಹಾಳ:ವಿಜಯನಗರ ಜಿಲ್ಲೆಯಲ್ಲಿ ಜರುಗಿದ ರಾಜ್ಯ ಕರಾಟೆ ಶಿಕ್ಷಕರ ಸಂಘದ 7ನೇ ಮಹಾಸಭೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿಯನ್ನು ಸ್ಥಳೀಯ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿಗೆ ಪ್ರದಾನ ಮಾಡಲಾಯಿತು.
ಶಾರದಳ್ಳಿ ಅವರು ಕರಾಟೆ ಶಿಕ್ಷಕನಾಗಿ ಹಲವು ವರ್ಷಗಳ ಸೇವೆ ಸಲ್ಲಿಸುವದರ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರ ಸೇರಿ ಇತರೆ ಕ್ಷೇತ್ರಗಳ ಇವರ ಪರಿಶ್ರಮದ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದ್ದಾರೆ.
ಈ ವೇಳೆ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಸಂಸ್ಥೆಯ ಅರುಣ್ ಮಾಚಯ್ಯ ರಾಜ್ಯಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಭಾರ್ಗವ ರೆಡ್ಡಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘ ರಾಜ್ಯಾಧ್ಯಕ್ಷರು ನದೀಮ್ ಪ್ರಧಾನ ಕಾರ್ಯದರ್ಶಿ ರವಿ ಸಾಲಿಯರ್ ಹಾಗೂ ಸ್ಥಳೀಯ ಕ್ರೀಡಾಧಿಕಾರಿಗಳು ವಿಜಯನಗರ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಅಧ್ಯಕ್ಷರು, ಉಪಾಧ್ಯಕ್ಷರು ಇತರೆ ಪದಾಧಿಕಾರಿಗಳು, ಪ್ರಮುಖರು ಸೇರಿದಂತೆ ಉಪಸ್ಥಿತರಿದ್ದರು.