ಹಾವೇರಿ: ಚಿತ್ರ ಮಂದಿರದಲ್ಲಿ KGF-2 ಚಿತ್ರ ವೀಕ್ಷಣೆ ವೇಳೆ ಯುವಕನೊಬ್ಬನ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದಲ್ಲಿ ಈ ಘಟನೆ ಜರುಗಿದೆ. ರಾಜೇಶ್ವರಿ ಚಿತ್ರ ಮಂದಿರದಲ್ಲಿ ಚಿತ್ರ ವೀಕ್ಷಿಸುತ್ತಿದ್ದ ವಸಂತ ಕುಮಾರ್ ಶಿವಪುರ ಎಂಬ ಯುವಕನ ಹೊಟ್ಟೆಗೆ ಗುಂಡು ತಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವಸಂತ ಕುಮಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಎಸ್ಪಿ ಹನುಮಂತರಾಯ ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.