ಪಠ್ಯದ ಜೊತೆ ಕ್ರೀಡೆಗೂ ಮಹತ್ವ ನೀಡಬೇಕು
ಇಂಡಿ:”ಇಂದು ಪಠ್ಯದ ಜೊತೆ ಕ್ರೀಡೆಗೂ ಮಹತ್ವ ನೀಡಬೇಕು ಕ್ರೀಡೆಗಳಲ್ಲಿ ಎಲ್ಲ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬೇಕು.”ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಅನೀಸ್ ಮುಜಾವರ ಹೇಳಿದರು.
ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವ ಭಾರತಿ ವಿದ್ಯಾ ಕೇಂದ್ರ ಪ್ರಾಥಮಿಕ ಪ್ರೌಢ ಹಾಗೂ ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಆಟಗಳಲ್ಲಿ ಗೆದ್ದ ತಂಡಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿಧ್ಯಾರ್ಥಿಗಳ ಮನಸ್ಸು ಸದೃಢವಾಗುತ್ತದೆ. ಆದ್ದರಿಂದ ಎಲ್ಲರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಗೆಲುವು ಸೋಲಿನ ಬಗ್ಗೆ ಚಿಂತಿಸದೆ ಆಟಗಳನ್ನು ಮನಃಪೂರ್ವಕವಾಗಿ ಆಡಬೇಕೆಂದು, ಎಲ್ಲಾ ಶಿಕ್ಷಕರು ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಸಂಸ್ಥೆಯ ಸಿಬ್ಬಂದಿಯವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಗ್ರಾಮೀಣ ಮಟ್ಟದಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯ ಅಧ್ಯಕ್ಷರ ಹಾಗೂ ಶಿಕ್ಷಕರ ಕಾರ್ಯಸಾಧನೆಯನ್ನು ಪ್ರಶಂಸಿಶಿದರು.
ಇನ್ನೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ ಟಿ ಪಾಟೀಲ ಮಾತನಾಡಿ ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದು ಕ್ರೀಡೆಗಳಲ್ಲಿ ಸಾಧನೆ ಮಾಡಲು ದೈಹಿಕ ಶಿಕ್ಷಕರು ಕ್ರೀಡಾಪಟುಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ನೀಡಬೇಕು. ಉತ್ತಮ ಕ್ರೀಡಾಪಟುಗಳನ್ನು ಗುರುತಿಸುವಲ್ಲಿ ಸಫಲರಾಗಬೇಕು ಎಂದರು. ೨೦ ವರ್ಷಗಳ ಹಿಂದೆ ಈ ಸಂಸ್ಥೆ ಕೇವಲ ಎರಡು ರೂಮುಗಳಲ್ಲಿ ದೇವಸ್ಥಾನದಲ್ಲಿ ನಡೆಯುತ್ತಿತ್ತು. ಇಂದು ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಅಪಾರವಾದ ಶ್ರಮದಿಂದ ಸಾಧ್ಯವಾಗಿದೆ ಎಂದರು.
ಕ್ರೀಡಾ ಜ್ಯೋತಿಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷ ಎಸ್ ವಿ ಹರಳಯ್ಯ, ಉಪಾಧ್ಯಕ್ಷ ಪಿ ಜಿ ಕಲ್ಮನಿ, ಸ್ವೀಕರಿಸಿದರು, ತಾಲೂಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನಿರ್ಮಲಾ ತಳಕೇರಿ ರಿಬ್ಬನ ಕತ್ತರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಗ್ರಾಮ ಪಂಚಾಯತ ಅಧ್ಯಕ್ಷೆ ಶೈಲಜಾ ಜಾದವ್, ಪೂಜ್ಯರಾದ ಸದಾನಂದ ಹಿರೇಮಠರವರು ಸಾನಿಧ್ಯವನ್ನು ವಹಿಸಿಕೊಂಡಿದ್ದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಶ್ರೀಶೈಲ್ ಗೌಡ ಬಿರಾದಾರ್,ಪ್ರಕಾಶ್ ನಾಯಕ, ಆನಂದ ಹುಣಸಿಗಿ, ರಂಗರಾಜ ಕಲರ‍್ಣಿ, ಅಲ್ಲಾಭಕ್ಷ ಚೌದರಿ, ಸಿ ಆರ್ ಪಿ ರಮೇಶ್ ಬಗಲೂರ, ವಿ ಜಿ ಕಲ್ಮನಿ, ಸೋಮನಾಥ್ ಕುಂಬಾರ್, ಗ್ರಾಮದ ಗಣ್ಯರು ಗ್ರಾಮ ಪಂಚಾಯತಿ ಸದಸ್ಯರುಗಳು, ಸಂಸ್ಥೆ ಆಡಳಿತ ಅಧಿಕಾರಿಗಳು, ಗುರುಗಳು ಗುರು ಮಾತೆರಯರು, ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು. ತಾಲೂಕ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಆರ್ ಡಿ ಇಂಡಿಕರ್ ಗುರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ‍್ಯಕ್ರಮವನ್ನು ಶಿವಾನಂದ್ ಶಿಕ್ಷಕರು ನಿರೂಪಿಸಿ ವಂದಿಸಿದರು.