ರಾಯಚೂರು : ಯುಗಾದಿ ಹಬ್ಬದ ಹಿನ್ನೆಲೆ ರಾಯರ ಮಠದಲ್ಲಿ ಶ್ರಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ತೈಲಾಭ್ಯಂಜನ ಮಾಡಿದ ಶ್ರೀ ಸುಭುದೇಂದ್ರ ತೀರ್ಥರು ತುಳಸಿ ಮತ್ತು ಗೋಪೂಜೆ ನೆರವೇರಿಸಿ ಶ್ರೀ ರಾಯರಿಗೆ ಮಂಗಳಾರತಿ ಮಾಡಿದರು.
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಇನ್ನು ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ ಶ್ರೀ ಸುಭುದೇಂದ್ರ ತೀರ್ಥರು ಮಹಾಂಮಗಳಾರತಿ ಮಾಡಿ, ನಂತರ ಮೂಲರಾಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ರಾಘವೇಂದ್ರ ಸ್ವಾಮಿಗಳ ಮತ್ತು ಶ್ರೀರಾಮ ದೇವರ ಕೃಪೆಗೆ ಪಾತ್ರರಾದರು.