VOJ ನ್ಯೂಸ್ ಡೆಸ್ಕ್ : ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಹೊಗಿದ್ದ ಭಕ್ತರು ಸ್ಥಳಿಯರ ನಡುವಿನ ಜಗಳ ಗಲಬೆಗೆ ಕಾರಣವಾಗಿ ಉದ್ವಿಗ್ನಪರೀಸ್ಥಿತಿಗೆ ತಿರುಗಿದೆ. ರಾಜ್ಯದ 400 ವಾಹನಗಳು ಜಖಂ ಗೊಂಡಿವೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಶ್ರೀಶೈಲದಲ್ಲಿ ಕಳೆದ ರಾತ್ರಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು. ಸ್ಥಳೀಯ ವ್ಯಾಪಾರಸ್ಥರು ಹಾಗೂ ಕರ್ನಾಟಕದಿಂದ ಬಂದಿದ್ದ ಯಾತ್ರಿಗಳ ನಡುವೆ ಗಲಾಟೆಯಾಗಿದ್ದು, ಅದು ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಜಾನಮಟ್ಟಿ ನಿವಾಸಿ ಶ್ರೀಶೈಲ ವಾರಿಮಠ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಾಟ ಮಾಡುತ್ತಿರುವುದನ್ನು ಕರ್ನಾಟಕದ ಯಾತ್ರಿಗಳು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ವ್ಯಾಪಾರಿಯೊಬ್ಬ ಎಳನೀರು ಕೊಚ್ಚುವ ಮಚ್ಚಿನಿಂದ ಕರ್ನಾಟಕದ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವಿಷಯ ಎಲ್ಲೆಡೆ ಹರಡುತ್ತಿದ್ದಂತೆ ಕರ್ನಾಟಕದಿಂದ ಬಂದಿದ್ದ ಯಾತ್ರಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದು ಗಲಬೆಗೆ ಕಾರಣವಾಗಿದೆ. ಘರ್ಷಣೆಯಲ್ಲಿ ಕರ್ನಾಟಕದಿಂದ ತೆರಳಿದ್ದ 200ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಲಾಗಿದೆ. ಪೊಲೀಸ್ ಬ್ಯಾರಿಕೇಡ್‌ಗೆ ಬೆಂಕಿ ಹಚ್ಚಲಾಗಿದೆ. ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಲಾಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಸ್ಥಳೀಯ ಅಂಗಡಿಗಳ ಮೇಲೂ ದಾಳಿ ನಡೆದಿದೆ. ಘಟನೆಯಿಂದಾಗಿ ಶ್ರೀಶೈಲದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ವಾಹನಗಳನ್ನು ನಗರದ ಒಳಗೆ ಬಿಡಲಾಗುತ್ತಿಲ್ಲ ಸದ್ಯದ ಪರಿಸ್ಥಿತಿ ಉದ್ವಿಗ್ನವಾಗಿದ್ದು ಪೊಲೀಸರು ಇದನ್ನು ನಿಯಂತ್ರಣಕ್ಕೆ ತರಲು ಪ್ರಯತ್ನ ಪಡುತ್ತಿದ್ದಾರೆ.