ಎಸ್‌ಎಸ್‌ಎಲ್‌ಸಿ-೨ರ ಪರೀಕ್ಷೆಯ ವೆಬ್ ಕಾಸ್ಟಿಂಗ್ :
ಪರಿಶೀಲನೆ ನಡೆಸಿದ ಜಿ.ಪಂ ಸಿಇಓ ರಿಷಿ ಆನಂದ
ವಿಜಯಪುರ, ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ-೨ರ ಪರೀಕ್ಷೆ ನಡೆದಿರುವ ನಿಮಿತ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾ ಪಂಚಾಯಿತಿಯ ಸಂಪನ್ಮೂಲ ಕೇಂದ್ರದ ಜಿಲ್ಲಾ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ಪರೀಕ್ಷಾ ಕೇಂದ್ರಗಳ ವೆಬ್ ಕಾಸ್ಟಿಂಗ್ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ ಸಿಇಓರವರು, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪರೀಕ್ಷಾ ಅವಧಿಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳುಂಟಾಗದAತೆ ಹಾಗೂ ಸಿಸಿಟಿವಿ ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಸಿಸಿಟಿವಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಮಾಡÀಬೇಕು. ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೀಡಾಗದAತೆ ಸುಸೂತ್ರವಾಗಿ ನಡೆಸಬೇಕು. ಪರೀಕ್ಷೆಗಳಲ್ಲಿ ಯಾವುದೇ ನಕಲಿಗೆ ಅವಕಾಶ ಒದಗಿಸದೇ ಪಾರದರ್ಶಕ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಮತ್ತು ಶಿಸ್ತಿನಿಂದ ನಡೆಸುವುದು. ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯ ಅಧಿಕಾರಿಗಳಾದ ಎಮ್. ಎ. ಗಳೆದಗುಡ್ಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ರೇಣುಕಾ ಕಲಬುರ್ಗಿ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಎಮ್. ಎಸ್. ಬ್ಯಾಹಟ್ಟಿ, ಎಪಿಸಿ ಆರ್. ಬಿ. ಪಾಟೀಲ, ಉಪನ್ಯಾಸಕರಾದ ನಾರಾಯಣ ಬಾಬಾನಗರ ಸೇರಿದಂತೆ ಅಧಿಕಾರಿ, ಸಿಬ್ಬಂದ ಉಪಸ್ಥಿತರಿದ್ದರು.