ಎಸ್ಸೆಸ್ಸೆಲ್ಸಿ ಪರೀಕ್ಷೆ – ೨ ಇಂದಿನಿಂದ
ಇಂಡಿ : ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂ. ೧೪ ರಿಂದ ೨೨ ರ ವರಗೆ ನಡೆಯಲಿದ್ದು ಇಂಡಿ ತಾಲೂಕಿನಲ್ಲಿ ಒಟ್ಟು ೮೧೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಎಸ್.ಬಿ.ಪಾಟೀಲ ತಿಳಿಸಿದ್ದಾರೆ.
ನೊಂದಾಯಿತ ಅಭ್ಯರ್ಥಿಗಳಲ್ಲಿ ಪುನರಾವರ್ತಿತ ೭೯೬, ಫಲಿತಾಂಶ ಸುಧಾರಣೆ ೧೪, ಒಳಗೊಂಡಿದ್ದಾರೆ.
ಒಟ್ಟು ಎರಡು ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು ಇಂಡಿಯ ಶಾಂತೇಶ್ವರ ಪ್ರೌಢಶಾಲೆಯಲ್ಲಿ ೪೦೨ ಮತ್ತು ಸರಕಾರಿ ಪ್ರೌಢಶಾಲೆಯಲ್ಲಿ ೪೦೮ ಪರೀಕ್ಷೆ ಬರೆಯಲಿದ್ದಾರೆ.
ಪ್ರಶ್ನೆ ಪತ್ರಿಕೆ ವಿತರಣೆಗೆ ಮಾರ್ಗಗಳನ್ನು ರಚಿಸಿ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಎಲ್ಲಾ ಅಗತ್ಯ ಮೂಲ ಭೂತ ಸೌಕರ್ಯಗಳನ್ನು ಪರೀಕ್ಷಾ ಕೇಂದ್ರ ಹೊಂದಿವೆ. ಎರಡು ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಕ್ಯಾಮೇರಾ ಅಳವಡಿಸಲಾಗಿದೆ. ಪರೀಕ್ಷಾ ಕಾರ್ಯವು ಪಾರಧರ್ಶಕವಾಗಿ ನಡೆಯುತ್ತಿರುವದನ್ನು ಖಚಿತ ಪಡಿಸಿಕೊಳ್ಳಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕೇಂದ್ರೀಕೃತವಾದ ವೆಬ್ ಕಾಸ್ಟಿಂಗ ಮಾಡಲು ಕ್ರಮವಹಿಸಲಾಗಿದೆ.
ಪರೀಕ್ಷೆನಡೆಯುವ ಹಿನ್ನೆಯಲ್ಲಿ ಕೇಂದ್ರಗಳ ಸುತ್ತಲೂ ೨೦೦ ಮೀ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇದಿತ ಸ್ಥಳವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಪಾಟೀಲ ತಿಳಿಸಿದರು.
ಇಂಡಿಯ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ