ಎಸ್ ಎಸ್ ಎಲ್ ಸಿ ಪರೀಕ್ಷೆ
ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು
ಇಂಡಿ: ಎಸ್ಎಸ್ಎಲ್ ಸಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಪ್ರಮುಖವಾದದ್ದು. ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದೆ ಅವರ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕು ಎನ್ನುವುದು ನಮ್ಮ ಆಸೆ ಎಂದು ಇಂಡಿ ತಾಲೂಕ ತಹಶೀಲ್ದಾರ್ ಮಂಜುಳಾ ನಾಯಕ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಆದರ್ಶ ಮಹಾವಿದ್ಯಾಲಯದಲ್ಲಿ
ಇಂದು ಆರಂಭವಾದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ, ಶುಭ ಹಾರೈಸಿ,ಪರೀಕ್ಷೆಗೆ ವಿನೂತನವಾಗಿ ಬರಮಾಡಿಕೊಂಡು ಅಭಿಪ್ರಾಯ ತಿಳಿಸಿದರು.
ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ತಿಳಿಸಿದರು.
ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ತಿಳಿಸಿದರು.
ಇಂಡಿ ತಾಲೂಕ ತಹಶೀಲ್ದಾರ್ ಮಂಜುಳಾ ನಾಯಕ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡಗಡ್ಡಿ, ಇಂಡಿ ತಾಲೂಕ ಎಸ್ ಎಸ್ ಎಲ್ ಸಿ ಪರೀಕ್ಷಾ ನೋಡಲ್ ಅಧಿಕಾರಿ ಎಸ್ ಬಿ ಪಾಟೀಲ, ಬಿ ಆರ್ ಪಿ ಅಧಿಕಾರಿ ಆಯ್ ಜಿ ಆಳೂರ, ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಎಸ್ ಎಂ ಬಡಿಗೇರ ಸೇರಿದಂತೆ ಅನೇಕರು ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ದ್ವಾರಬಾಗಿಲಲ್ಲಿಯೇ ಗುಲಾಬಿ ಹೂ ನೀಡಿ ಸ್ವಾಗತ ಮಾಡಿಕೊಂಡು, ಶುಭ ಹಾರೈಸಿದರು.