ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ..
- ಮಾರ್ಚ -25 ರಿಂದ ಏಪ್ರಿಲ್ – 6
- ರಾಜ್ಯದಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳು 2750
- ಒಟ್ಟು 8,69,968 ವಿದ್ಯಾರ್ಥಿಗಳು
- 4,41,910 ಬಾಲಕರು, 4,28,058 ಬಾಲಕಿಯರು
- 54,254 ವಿಶೇಷ ಚೇತನ ವಿದ್ಯಾರ್ಥಿಗಳು
Voice Of Janata : Editor : SSLC EXAM 2024
ಬೆಂಗಳೂರು ಮಾರ್ಚ್ 24: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಾಳೆಯಿಂದ (ಮಾರ್ಚ್ 25) ರಂಭವಾಗಲಿದೆ. ಸೋಮವಾರದಿಂದ ರಾಜ್ಯಾದ್ಯಂತ ವಾರ್ಷಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ.
ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.
ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.
ನಿಷೇಧಾಜ್ಞೆ:
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ನೀರು, ವಿದ್ಯುತ್, ಕುಳಿತುಕೊಳ್ಳುವ ಸ್ಥಳ, ಫ್ಯಾನ್ ಹೀಗೆ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ
ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ
(ಪ್ರಥಮ ಭಾಷೆ) 25-03-2024
ಸಮಾಜ ವಿಜ್ಞಾನ-27-03-2024
ವಿಜ್ಞಾನ-30-03-2024
ಗಣಿತ-02-04-2024
ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್)-03-04-2024
ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ)-04-04-2024
ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)-06-04-2024
ಬಿಸಿಯೂಟ:
ಜೊತೆಗೆ SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆಗಳು ನಡೆದಿವೆ.