ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಇದಕ್ಕೆ ಎಲ್ಲ ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಹಿಜಾಬ್ ವಿವಾದ ಕುರಿತಂತೆ ಕೂಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಇದನ್ನು ವಿದ್ಯಾರ್ಥಿನಿಯರು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸಚಿವ ನಾಗೇಶ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಈ ಬಾರಿ 8,73, 846 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಎದುರಿಸಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.