ಎಸ್ಎಸ್ಎಲ್ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ
ವಿಜಯಪುರ,ಮೇ.09 : 2025ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ನ್ನು ಇದೇ ಮೇ 26 ರಿಂದ ಜೂನ್ 02ರವರೆಗೆ ನಡೆಯಲಿದೆ.
ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಪ್ರಪ್ರಥಮ ಬಾರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ನೋಂದಾಯಿಸಿಕೊಳ್ಳಲು ಮೇ-10 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಸಂಬಂಧಿಸಿದ ಪ್ರೌಢÀಶಾಲೆಗಳ ಮೂಲಕ ಪರೀಕ್ಷೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.