ಬೆಂಗಳೂರು: ಗಾಂಧಿ ಭವನದಲ್ಲಿ ಅಖಿಲ ಕರ್ನಾಟಕ ಹೆಳವ ಸಮಾಜದ ಕಾರ್ಯಕಾರಿ ಮಂಡಳಿ ಸಭೆಯನ್ನು ರಾಜ್ಯ ಅಧ್ಯಕ್ಷ ಎನ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ 25ರಂದು ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಅಶೋಕ ಬಿ ಹೆಳವರ ತಿಳಿಸಿದ್ದಾರೆ ಕಾರ್ಯಕ್ರಮಕ್ಕೆ ವಿಶೇಷವಾಗಿ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಳ್ಳಲಿದ್ದಾರೆ ಅದಕ್ಕಾಗಿ ತಾವೆಲ್ಲರೂ ರಾಜ್ಯ ಜಿಲ್ಲೆ ತಾಲೂಕು ಗ್ರಾಮ ಮಟ್ಟದ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಬೇಕೆಂದು ಕೋರಿದ್ದಾರೆ.
ಅಶೋಕ್ ಬಿ ಹೆಳವರ್ ಹೆಳವ ಸಮಾಜದ ತಾಲೂಕು ಅಧ್ಯಕ್ಷರು ಹಾಗೂ ಅಲೆಮಾರಿ ಜನಾಂಗದ ಸಮಿತಿ ನಿರ್ದೇಶಕರು ಅಪಜಲಪುರ.