VOJ ನ್ಯೂಸ್ ಡೆಸ್ಕ್: ಸಿ ಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಚಂದನಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಚಂದನಾ ಅವರ ಅಮ್ಮ ಬ್ಯಾಂಕ್ ಉದ್ಯೋಗಿಯಾಗಿದ್ದು, ಅಪ್ಪ ರಾಜ್ಯ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೈಸೂರಿನ ದಾಸರಕೊಪ್ಪದಲ್ಲಿ ಈ ಪ್ರಕರಣ ವರದಿಯಾಗಿದೆ. ಜೈಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.