ಮಸ್ಕಿ : ಕೌಟುಂಬಿಕ ಕಲಹದಿಂದ ಬೇಸತ್ತು ಬಾಗಲವಾಡ ಗ್ರಾಮದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಜರುಗಿದೆ.
ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿರುವ ಪಬ್ಲಿಕ್ ಶಾಲೆಯ ಹಿಂಬದಿಯ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಮಾನವಿ ತಾಲೂಕಿನ ಬಾಗಲವಾಡ ಗ್ರಾಮದ ಮಹಾಂತೇಶ(40) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ. ಮನೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಬಾಗಲವಾಡ ಗ್ರಾಮದಿಂದ ಮಸ್ಕಿಗೆ ಬೈಕ್ ಮೇಲೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ ಯುವಕರು ಇದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.