3 ಎಕರೆ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕಿಟ್ ಸುಟ್ಟು ಭಸ್ಮ್..!
ಇಂಡಿ: ತಾಲ್ಲೂಕಿನ ಆಳೂರ ಗ್ರಾಮದಲ್ಲಿ ಮಂಗಳವಾರ
ರೈತೆ ಶೈಲಾ ಬಸವರಾಜ ಪೂಜಾರಿ ಅವರ ತೋಟದಲ್ಲಿ ಬೆಳೆದು ನಿಂತಿರುವ ಸುಮಾರು 3 ಎಕರೆ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದ ಬೆಂಕಿ ತಗುಲಿ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ಇಂಡಿ ಪಟ್ಟಣದ ಅಗ್ನಿ ಶಾಮಕ ಪಡೆ ಸ್ಥಳಕ್ಕೆ ಬರುವಷ್ಟರಲ್ಲಿ ಕಬ್ಬು ಸಂಪೂರ್ಣ ಸುಟ್ಟು ಹೋಗಿತ್ತು.
ಸುಮಾರು ರೂ 4,50,000/ ಲಕ್ಷದಷ್ಟು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಪ್ರಕರಣ ಇಂಡಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.