T20 World Cup: ಸೂಪರ್ 8 ಕದನದಲ್ಲಿ ದಕ್ಷಿಣ ಆಫ್ರಿಕಾ vs ಯುಎಸ್ಎ ಮುಖಾಮುಖಿ ?
ICC T20 WORLD CUP 2024 : Voice Of Janata : Sports NEWS :
ಐಸಿಸಿ ಟಿ20 ವಿಶ್ವಕಪ್ 2024 (T20 World Cup 2024) ಗುಂಪು ಹಂತ ಕೊನೆಗೊಂಡಿದೆ. ಇನ್ನೇನಿದ್ದರೂ ಸೂಪರ್-8 ಕದನ ಆರಂಭವಾಗಲಿದೆ. ಇಂದು (ಜೂನ್ 19) ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಸಹ-ಆತಿಥೇಯ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ (USA vs SA) ನಡುವೆ ಮೊದಲ ಸೂಪರ್-8 ಪಂದ್ಯ ನಡೆಯಲಿದೆ. ಪಂದ್ಯಾವಳಿಯ ಸೂಪರ್-8 ಹಂತ ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಉತ್ಸುಕರಾಗಿದ್ದಾರೆ.
ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ XI
ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡಾ, ಆನ್ರಿಚ್ ನೋಕಿಯಾ.
ಯುನೈಟೆಡ್ ಸ್ಟೇಟ್ಸ್ ಸಂಭಾವ್ಯ ಪ್ಲೇಯಿಂಗ್ XI
ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್ (ನಾಯಕ & ವಿಕೆಟ್ ಕೀಪರ್), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಜಸ್ದೀಪ್ ಸಿಂಗ್, ನೋಸ್ತುಶ್ ಕೆಂಜಿಗೆ, ಅಲಿ ಖಾನ್, ಸೌರಭ್ ನೇತ್ರವಲ್ಕರ್.
ಲೈವ್ ಸ್ಟ್ರೀಮಿಂಗ್ ವಿವರ
ನಿರೀಕ್ಷಿತ ಯುಎಸ್ಎ vs ಸೌತ್ ಆಫ್ರಿಕಾ ಪಂದ್ಯವು ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಕ್ರಿಕೆಟ್ ಅಭಿಮಾನಿಗಳು ರೋಚಕ ಘರ್ಷಣೆಯನ್ನು ವೀಕ್ಷಿಸಬಹುದು. ಮತ್ತೊಂದೆಡೆ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ+ಹಾಟ್ಸ್ಟಾರ್ನಲ್ಲಿ ಲಭ್ಯವಿರುತ್ತದೆ. ಮೊಬೈಲ್ನಲ್ಲಿ ಸಂಪೂರ್ಣ ಉಚಿತವಾಗಿರಲಿದೆ.