Voice Of Janata Sports News: Men’s ICCT20 WORLD CUP 2024
T20 ವಿಶ್ವಕಪ್ : ಭಾರತ ಮತ್ತು ಪಾಕಿಸ್ತಾನ ಹೈವೊಲ್ವೆಜ್ ಫೈಟ್ ಪಂದ್ಯ ಎಂದು ಗೊತ್ತಾ..?
ನವದೆಹಲಿ: ಟಿ20 ವಿಶ್ವಕಪ್‌ನ ಹೈವೊಲ್ವೆಜ್ ಫೈಟ್ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಜೂನ್ 9 ರಂದು ನಡೆಯಲಿದೆ. ಭಾನುವಾರ ನಡೆಯಲಿರುವ ಈ ಪಂದ್ಯಕ್ಕೆ ನ್ಯೂಯಾರ್ಕ್ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಈ ಪಂದ್ಯವು ಯುಎಸ್‌ಎ ಕಾಲಮಾನ ಬೆಳಿಗ್ಗೆ 9.30 ರಿಂದ ಶುರುವಾಗಲಿದ್ದು, ಭಾರತದಲ್ಲಿ ರಾತ್ರಿ 8 ಗಂಟೆಯಿಂದ ನೇರ ಪ್ರಸಾರವಾಗಲಿದೆ.
ಜೂನ್ 1ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ತನ್ನ ಆಭಿಯಾನವನ್ನು ಜೂನ್ 05ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಬಳಿಕ ಜೂನ್ 09ರಂದು ಬದ್ಧವೈರಿ ಪಾಕಿಸ್ತಾನದ ವಿರುದ್ಧ ಆಡಲಿದೆ.
ನ್ 1 ರಿಂದ ಈ ಬಾರಿಯ ಚುಟುಕು ವಿಶ್ವಕಪ್ ಕದನ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಟೂರ್ನಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, ಎಲ್ಲಿಯೂ ಕೂಡ ಪಂದ್ಯ ಆರಂಭದ ಬಗ್ಗೆ ಸಮಯವನ್ನು ಪ್ರಸ್ತಾಪಿಸಲಾಗಿಲ್ಲ. ಇದೀಗ ಭಾರತ ತಂಡದ ಪಂದ್ಯಗಳ ಸಮಯ ಬಹಿರಂಗವಾಗಿದ್ದು, ಕ್ರೀಡಾಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಘಂಟೆ ಸುಮಾರಿಗೆ ಶುರು ಆಗಲಿದೆ. ಅಂದರೆ ಭಾರತದ ಪಂದ್ಯಗಳು ಯುಎಸ್‌ಎನಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಆರಂಭವಾಗಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನೇರ ಪ್ರಸಾರವಾಗಲಿದೆ. ಇಲ್ಲಿ ಭಾರತ ಮತ್ತು ಯುಎಸ್ಎ ನಡುವೆ 10.30 ಗಂಟೆಗಳ ಸಮಯ ವ್ಯತ್ಯಾಸವಿದೆ.
ಅತ್ತ ಯುಎಸ್‌ಎನಲ್ಲಿ ರಾತ್ರಿಯಾಗಿದ್ದರೆ, ಇತ್ತ ಭಾರತದಲ್ಲಿ ಬೆಳಿಗ್ಗೆಯಾಗಿರುತ್ತದೆ. ಹೀಗಾಗಿಯೇ ಭಾರತದ ಪಂದ್ಯಗಳನ್ನು ಯುಎಸ್‌ಎನಲ್ಲಿ ಬೆಳಿಗ್ಗೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ವೀಕ್ಷಕರ ಕೊರತೆ ಉಂಟಾಗುವುದಿಲ್ಲ. ಹೀಗಾಗಿ ಭಾರತದ ಪಂದ್ಯಗಳಿಗೆ ಬೆಳಿಗ್ಗೆ ಸಮಯ ನಿಗದಿ ಮಾಡಲಾಗಿದೆ.